Posts

Showing posts from December 28, 2007

ಕಳಬೇಡ ಕೊಲಬೇಡ

ಕಳಬೇಡ ಕೊಲಬೇಡ ಹುಸಿಯ ನುಡಿಯಲುಬೇಡ ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ ತನ್ನ ಬಣ್ಣಿಸಬೇಡ ಇದಿರ ಹಳಿಯಲುಬೇಡ ಇದೇ ಅಂತರಂಗ ಶುದ್ಧಿ ಇದೇ ಬಹಿರಂಗ ಶುದ್ಧಿ ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ -ಬಸವಣ್ಣ